HEALTH TIPS

ಪಿಣರಾಯಿ ವಿಜಯನ್ ಪುತ್ರಿ ವಿರುದ್ಧ ದೂರು ದಾಖಲಿಸಿಕೊಂಡ ಇ.ಡಿ

           ಕೊಚ್ಚಿ: ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿಜಯನ್, ಆವರಿಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ದೂರು ದಾಖಲಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

             ಹಣದ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿದೆ. ಇದರಲ್ಲಿ ಭಾಗಿಯಾಗಿರುವವರಿಗೆ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು       ಮೂಲಗಳು ತಿಳಿಸಿವೆ.

            ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಗಂಭೀರ ವಂಚನೆ ಪ್ರಕರಣಗಳ ತನಿಖಾ ವಿಭಾಗ (ಎಸ್‌ಎಫ್‌ಐಒ) ಸಲ್ಲಿಸಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

                2018-19ರ ಅವಧಿಯಲ್ಲಿ ಕೊಚ್ಚಿನ್ ಮಿನರಲ್ಸ್‌ ಹಾಗೂ ರುಟೈಲ್ ಲಿಮಿಟೆಡ್‌ ಎನ್ನುವ ಕಂಪನಿಗಳು ವೀಣಾ ಅವರ ಎಕ್ಸಲಾಜಿಕ್ ಸೆಲ್ಯೂಷನ್‌ನಿಂದ ಯಾವುದೇ ಸೇವೆ ಪಡೆಯದಿದ್ದರೂ ₹1.72 ಕೋಟಿ ಹಣವನ್ನು ಅಕ್ರಮವಾಗಿ ಪಾವತಿ ಮಾಡಿದೆ ಎಂದು ಆರೋಪಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries