HEALTH TIPS

ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿ ಎಕ್ಸ್ ರೇ ಘಟಕ ಉದ್ಘಾಟನೆ

               ಉಪ್ಪಳ: ಗ್ರಾಮೀಣ ಹಾಗೂ ಕರಾವಳಿ ಭಾಗದ ನೂರಾರು ಜನರು ಅವಲಂಬಿಸಿರುವ ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ಮಂಜೇಶ್ವರ ಬ್ಲಾಕ್ ಆಸರೆಯಾಗಿದೆ. ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿ ನೂತನವಾಗಿ ಆರಂಭೀಸಲಾದ ಎಕ್ಸ್ ರೇ ಘಟಕವನ್ನು ಶಾಸಕ ಎ.ಕೆ.ಎಂ.ಅಶ್ರಫ್ ಗುರುವಾರ ಉದ್ಘಾಟಿಸಿದರು. ಮಂಜೇಶ್ವರ ಬ್ಲಾಕ್ ಪಂಚಾಯತಿ 16 ಲಕ್ಷ ರೂ. ವೆಚ್ಚದಲ್ಲಿ ಎಕ್ಸ್ ರೇ ಘಟಕವನ್ನು ಸ್ಥಾಪಿಸಿದೆ. 

             ತಾಲೂಕು ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷೆ ಶಮೀನಾ ಟೀಚರ್ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಎ.ಶಂಸೀನಾ, ಡಿಎಂಒ ಆರ್ ಸಿಎಚ್ ಅಧಿಕಾರಿ ಡಾ.ಕೆ.ಕೆ ಶಾಂತಿ, ಮಂಗಲ್ಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರುಬೀನಾ ನೌಫಲ್, ಮಂಜೇಶ್ವರ ಗ್ರಾಮ ಪಂಚಾಯತಿ ಅಧ್ಯಕ್ಷೆ ಜೀನ್ ಲವೀನಾ ಮೊಂತೆರೋ, ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್. ಶೆಟ್ಟಿ, ಜಿಲ್ಲಾ ಪಂಚಾಯತಿ ಸದಸ್ಯ ಗೋಲ್ಡನ್ ಅಬ್ದುಲ್ ರಹಮಾನ್, ಮಂಜೇಶ್ವರ ಬ್ಲಾಕ್ ಪಂಚಾಯತಿ ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಎನ್.ಅಬ್ದುಲ್ ಹಮೀದ್, ಪೈವಳಿಕೆ ಗ್ರಾಮ ಪಂಚಾಯತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಜೆಡ್.ಎ.ಕಯ್ಯಾರ್, ಮಂಗಲ್ಪಾಡಿ ಗ್ರಾಮ ಪಂಚಾಯತಿ ಸದಸ್ಯ ಮಜೀದ್ ಪಚ್ಚಂಬಳ, ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯ ಶಾಫಾ ಫಾರೂಕ್, ಮಂಗಲ್ಪಾಡಿ ಗ್ರಾ.ಪಂ. ಸದಸ್ಯ ಬಾಬು ಮಾತನಾಡಿದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಉಪಾಧ್ಯಕ್ಷ ಪಿ.ಕೆ. ಮುಹಮ್ಮದ್ ಹನೀಫ್ ಸ್ವಾಗತಿಸಿ, ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಅಧೀಕ್ಷಕ ಡಾ.ವಿ.ಅಂಬು ವಂದಿಸಿದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯರು ಹಾಗೂ ಎಚ್‍ಎಂಸಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries