ವಯನಾಡು: ಪೂಕೋಡ್ ಪಶುವೈದ್ಯಕೀಯ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಸಿದ್ಧಾರ್ಥ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದ್ವೇಷಪೂರಿತ ಭಾಷಣ ಮಾಡಿದ ಯೂಟ್ಯೂಬರ್ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಜಾಮಿದಾ ಟೀಚರ್ ಟಾಕ್ಸ್’ ಎಂಬ ಯೂಟ್ಯೂಬ್ ಚಾನೆಲ್ ಮೂಲಕ ದ್ವೇಷದ ಅಭಿಯಾನವನ್ನು ಹಬ್ಬಿಸಿದ ಕೆ. ಜಾಮಿದಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿದ್ಧಾರ್ಥ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ಮಾಡಿ ವಿವಿಧ ಧರ್ಮೀಯರ ನಡುವಿನ ಒಗ್ಗಟ್ಟು ಒಡೆಯಲು ಯತ್ನಿಸಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಗಸ್ತು ನಡೆಸುತ್ತಿದ್ದಾಗ ಈ ವಿಡಿಯೋ ಎಸ್‍ಐ ಪ್ರಶೋಭ್ ಪಿ.ವಿ ಅವರ ಗಮನಕ್ಕೆ ಬಂದಿದೆ. ಚಾನೆಲ್‍ನಲ್ಲಿರುವ ಇತರ ವೀಡಿಯೊಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಘಟನೆಯ ತನಿಖೆಯನ್ನು ಮುಂದುವರಿಸುತ್ತೇವೆ ಎಂದು ಪೋಲೀಸರು ತಿಳಿಸಿದ್ದಾರೆ.


