HEALTH TIPS

ಅಸ್ಸಾಂ: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಫಾರಿ

            ಕಾಜಿರಂಗ : ಅಸ್ಸಾಂನ ಖ್ಯಾತ ಕಾಜಿರಂಗ ರಾಷ್ಟ್ರೀಯ ಉದ್ಯಾನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಆನೆ ಹಾಗೂ ಜೀಪ್ ಸಫಾರಿ ಮಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

             ಇದು ಯುನೆಸ್ಕೋ ವಿಶ್ವ ಪಾರಂಪರಿಕ ತಾಣವಾಗಿದ್ದು, ಪ್ರಧಾನಿ ಮೋದಿಯವರ ಚೊಚ್ಚಲ ಭೇಟಿ ಇದು.

               ಸೆಂಟ್ರಲ್ ಖೋರಾ ವಲಯದ ಮಿಹಿಮುಖ್ ವಲಯದಲ್ಲಿ ಮೊದಲು ಆನೆ ಸಫಾರಿ ಮಾಡಿದ ಪ್ರಧಾನಿ ಬಳಿಕ ಇದೇ ವಲಯದಲ್ಲಿ ಜೀಪ್ ಸಫಾರಿಯನ್ನೂ ಮಾಡಿದರು ಎಂದು ತಿಳಿಸಿದ್ದಾರೆ.

                ಪ್ರಧಾನಿಗೆ ಉದ್ಯಾನದ ನಿರ್ದೇಶಕಿ ಸೋನಾಲಿ ಘೋಷ್ ಹಾಗೂ ಇತರೆ ಹಿರಿಯ ಅರಣ್ಯ ಸಿಬ್ಬಂದಿಗಳು ಸಾಥ್‌ ನೀಡಿದರು. ಎರಡು ದಿನಗಳ ಅಸ್ಸಾಂ ಪ್ರವಾಸಕ್ಕೆ ಬಂದಿರುವ ಅವರು, ಶುಕ್ರವಾರ ಸಂಜೆ ಕಾಜಿರಂಗಕ್ಕೆ ಆಗಮಿಸಿದ್ದರು.

           ಇಂದು ಮಧ್ಯಾಹ್ನ ಅಹೊಮ್ ಜನರಲ್ ಲಚಿತ್‌ ಬರ್ಪುಕನ್‌ ಅವರ 125 ಅಡಿಯ 'ಶೌರ್ಯದ ಪ್ರತಿಮೆ'ಯನ್ನು ಅವರು ಅನಾವರಣಗೊಳಿಸಿದರು.

                 ಬಳಿಕ ಜೊರ್ಹತ್‌ ಜಿಲ್ಲೆಯ ಮೆಲೆಂಗ್ ಮೆಟೆಲಿ ಪೊಥರ್‌ನಲ್ಲಿ, ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಸುಮಾರು 18 ಸಾವಿರ ಕೋಟಿಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries