ನವದೆಹಲಿ: ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹಲೋತ್ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿಗೆ ಬಂದಿದ್ದಾರೆ.
ನವದೆಹಲಿ: ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹಲೋತ್ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿಗೆ ಬಂದಿದ್ದಾರೆ.
ದೆಹಲಿ ಸರ್ಕಾರವು 'ಅಬಕಾರಿ ನೀತಿ' ಜಾರಿಗೆ ತಂದಿದ್ದ ಸಂದರ್ಭ ಹಣ ಅಕ್ರಮ ವರ್ಗಾವಣೆ ನಡೆದಿದೆ ಎನ್ನಲಾಗಿದೆ.
ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು, ಇದೇ ಪ್ರಕರಣ ಸಂಬಂಧ ಇ.ಡಿ ಫೆಬ್ರುವರಿ 21ರಂದು ಬಂಧಿಸಿದೆ. ವಿಚಾರಣೆಗೆ ಹಾಜರಾಗುವಂತೆ ಕಳುಹಿಸಿದ್ದ ಸಮನ್ಸ್‌ಗಳನ್ನು ಕೇಜ್ರಿವಾಲ್ ಪದೇ ಪದೇ ನಿರ್ಲಕ್ಷಿಸಿದ್ದರು.