ಪ್ರತಿ ಮೂವರಲ್ಲಿ ಒಬ್ಬರು ಕೋಟ್ಯಧಿಪತಿ. ಕಾಂಗ್ರೆಸ್‌ನ ಹಿರಿಯ ನಾಯಕ ಕಮಲನಾಥ್ ಪುತ್ರ ನಕುಲ್ ನಾಥ್ ಅತ್ಯಂತ ಶ್ರೀಮಂತ ಉಮೇದುವಾರ.
ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಹಾಗೂ ಇತರ ವಿಷಯಗಳ ಬಗ್ಗೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸೋಮವಾರ ವರದಿ ಪ್ರಕಟಿಸಿದೆ.
ಅಭ್ಯರ್ಥಿಯೊಬ್ಬರು ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದಾರೆ. 10 ಅಭ್ಯರ್ಥಿಗಳು ಯಾವುದೇ ಆಸ್ತಿ ಹೊಂದಿಲ್ಲವೆಂದು ಘೋಷಿಸಿಕೊಂಡಿದ್ದಾರೆ. ಮೊದಲ ಹಂತದ ಮತದಾನ 19 ರಂದು ನಡೆಯಲಿದೆ.




