HEALTH TIPS

ಆಸ್ಟ್ರೇಲಿಯಾ: ಶಾಪಿಂಗ್​ ಮಾಲ್‌ನಲ್ಲಿ ಚಾಕುವಿನಿಂದ ದಾಳಿ 5 ಸಾವು

              ಸಿಡ್ನಿ : ಶಾಪಿಂಗ್ ಮಾಲ್‌ನಲ್ಲಿ ವ್ಯಕ್ತಿಯೊಬ್ಬ ಜನರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದು ಘಟನೆಯಲ್ಲಿ 5 ಜನರು ಮೃತಪಟ್ಟು, ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.


               ಇಲ್ಲಿನ ಹೊರವಲಯದಲ್ಲಿನ ಬೋಂಡಿ ಜಂಕ್ಷನ್‌ನಲ್ಲಿರುವ ವೆಸ್ಟ್‌ಫೀಲ್ಡ್ ಶಾಪಿಂಗ್ ಸೆಂಟರ್‌ನಲ್ಲಿ ಶನಿವಾರ ಈ ಘಟನೆ ನಡೆದಿದೆ.

 

        

           ಮಾಲ್‌ನಲ್ಲಿ ಶಾಪಿಂಗ್‌ ಮಾಡುತ್ತಿದ್ದ ಹಲವಾರು ಜನರ ಮೇಲೆ ದಾಳಿಕೋರ ಏಕಾಏಕಿ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ತಕ್ಷಣಕ್ಕೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಅಲ್ಲಿದ ಹೊರಗೆ ಕಳುಹಿಸಿದ್ದಾರೆ. ನಂತರ ದಾಳಿಕೋರನ ಮೇಲೆ ಗುಂಡು ಹಾರಿಸಿದ್ದಾರೆ. ಅವನು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

               ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಸದ್ಯ ದಾಳಿಕೋರ ಯಾರು ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ದಾಳಿ ಮಾಡಿದ ವ್ಯಕ್ತಿ ಯಾರು? ಹಾಗೂ ಘಟನೆಗೆ ಕಾರಣ ಏನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries