HEALTH TIPS

ಬಿರುಗಾಳಿ | ಮೃತರ ಸಂಖ್ಯೆ 5ಕ್ಕೆ ಏರಿಕೆ; ಸಂತ್ರಸ್ತರನ್ನು ಭೇಟಿಯಾದ ಸಿಎಂ ಮಮತಾ

             ಲಪೈಗುರಿ: ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಬಿರುಗಾಳಿಯೊಂದಿಗೆ ಭಾರಿ ಮಳೆ ಸುರಿದಿದೆ. ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.


                ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಜಲಪೈಗುರಿ ಜಿಲ್ಲೆಯ ರಾಜರ್‌ಹಾಟ್, ಬರ್ನಿಷ್‌, ಬಾಕಲಿ, ಜೋರ್‌ಪಕಡಿ, ಮಾಧಬ್‌ಡಾಂಗಾ, ಸಪ್ತಿಬಾರಿ ಪ್ರದೇಶಗಳಲ್ಲಿ ಹೆಚ್ಚು ಹಾನಿಯಾಗಿದೆ.

ಅಲ್ಲದೇ ಮಳೆ ಸಂಬಂಧಿತ ಅವಘಡಗಳಲ್ಲಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

              ಭಾನುವಾರ ತಡರಾತ್ರಿ ಜಲಪೈಗುರಿ ಜಿಲ್ಲೆಗೆ ದೌಡಾಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.‌

                'ಅವಘಡದಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರ ಸಂಖ್ಯೆಯೂ ಹೆಚ್ಚಾಗಿದೆ. ಮೃತರ ಕುಟುಂಬ ಸದಸ್ಯರನ್ನು ಮತ್ತು ಗಾಯಾಳುಗಳನ್ನು ಭೇಟಿ ಮಾಡಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲಾಗುವುದು' ಎಂದು ಅವರು ಹೇಳಿದ್ದಾರೆ.

ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಪ್ರತಿಕ್ರಿಯಿಸಿದ ಸಿಎಂ, 'ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಗ್ಗೆ ಏನನ್ನೂ ಹೇಳಲಾಗುವುದಿಲ್ಲ' ಎಂದಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries