HEALTH TIPS

ಮುಂದಿನ 5 ವರ್ಷಗಳಲ್ಲಿ ಬೃಹತ್ ಜಾಗತಿಕ ಶಕ್ತಿ ಆಗಲಿರುವ ಭಾರತ: ಪ್ರಧಾನಿ ಮೋದಿ

              ದಾಮೋಹ್: ಈ ಬಾರಿಯ ಲೋಕಸಭೆ ಚುನಾವಣೆಯು ಮುಂದಿನ ಐದು ವರ್ಷಗಳಲ್ಲಿ ಭಾರತವನ್ನು ಬೃಹತ್‌ ಜಾಗತಿಕ ಶಕ್ತಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

            ಮಧ್ಯಪ್ರದೇಶದ ದಾಮೋಹ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ದಶಕಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ರಕ್ಷಣಾ ಕ್ಷೇತ್ರವನ್ನು ದುರ್ಬಲಗೊಳಿಸಿದೆ.

ಆದರೆ, ಈಗ ಬಿಜೆಪಿ ಸರ್ಕಾರ ರಕ್ಷಣಾ ಕ್ಷೇತ್ರವನ್ನು ಬಲಪಡಿಸುತ್ತಿದೆ. ಫ್ರಾನ್ಸ್‌ ನಿರ್ಮಿತ ರಫೇಲ್‌ ಯುದ್ಧ ವಿಮಾನಗಳು ಭಾರತಕ್ಕೆ ಬರುವುದು ವಿರೋಧ ಪಕ್ಷಕ್ಕೆ ಇಷ್ಟವಿರಲಿಲ್ಲ' ಎಂದು ಮೋದಿ ಆರೋಪಿಸಿದ್ದಾರೆ.

               'ಬಿಜೆಪಿ ಸರ್ಕಾರವು ದೇಶದ ರಕ್ಷಣಾ ಪಡೆಗಳನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತಿದೆ. ಭಾರತವು ಅನೇಕ ದೇಶಗಳಿಗೆ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುತ್ತಿದೆ. ಭಯೋತ್ಪಾದನೆಯಲ್ಲಿ ತೊಡಗಿದ್ದ ನೆರೆಯ ದೇಶ ಪಾಕಿಸ್ತಾನ ಈಗ ಆಹಾರಕ್ಕಾಗಿ ಹೆಣಗಾಡುತ್ತಿದೆ' ಎಂದು ಹೇಳಿದ್ದಾರೆ.

               ಕೇಂದ್ರ ಬಿಜೆಪಿ ಸರ್ಕಾರವು ಬಡವರ ಕಲ್ಯಾಣಕ್ಕೆ ಬದ್ಧವಾಗಿದೆ. ದೇಶದ ಸುಮಾರು 80 ಕೋಟಿ ಫಲಾನುಭವಿಗಳಿಗೆ ಉಚಿತ ಪಡಿತರ ಯೋಜನೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ. ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಲಿಷ್ಠ ಮತ್ತು ಸ್ಥಿರ ಸರ್ಕಾರವನ್ನು ಸ್ಥಾಪಿಸಲು ಮತ ಹಾಕುವಂತೆ ಮನವಿ ಮಾಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries