ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ತೆಲಂಗಾಣದ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ7ರವರೆಗೆ ವಿಸ್ತರಿಸಿ ಆದೇಶಿಸಿದೆ.
0
samarasasudhi
ಏಪ್ರಿಲ್ 23, 2024
ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ತೆಲಂಗಾಣದ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ7ರವರೆಗೆ ವಿಸ್ತರಿಸಿ ಆದೇಶಿಸಿದೆ.
ಕೇಜ್ರಿವಾಲ್ ಮತ್ತು ಕವಿತಾ ಅವರ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆ ವಿಡಿಯೊ ಕಾನ್ಪರೆನ್ಸ್ ಮೂಲಕ ಈ ಇಬ್ಬರನ್ನು ವಿಚಾರಣೆಗೆ ಹಾಜರುಪಡಿಸಲಾಗಿತ್ತು.