ತಿರುವನಂತಪುರ: ಕೇರಳದಲ್ಲಿ ಈಚೆಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ಉಂಟಾಗಿದ್ದ ಅವ್ಯವಸ್ಥೆಗಳ ಕುರಿತು ತನಿಖೆ ನಡೆಸಬೇಕೆಂದು ಕಾಂಗ್ರೆಸ್, ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
ಕೇರಳ : ಮತದಾನ ಪ್ರಕ್ರಿಯೆಯಲ್ಲಿ ಅವ್ಯವಸ್ಥೆ: ತನಿಖೆಗೆ ಕಾಂಗ್ರೆಸ್ ಒತ್ತಾಯ
0
ಏಪ್ರಿಲ್ 30, 2024
Tags
0
samarasasudhi
ಏಪ್ರಿಲ್ 30, 2024
ತಿರುವನಂತಪುರ: ಕೇರಳದಲ್ಲಿ ಈಚೆಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ಉಂಟಾಗಿದ್ದ ಅವ್ಯವಸ್ಥೆಗಳ ಕುರಿತು ತನಿಖೆ ನಡೆಸಬೇಕೆಂದು ಕಾಂಗ್ರೆಸ್, ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
ಹಲವು ಮತಗಟ್ಟೆಗಳಲ್ಲಿ ಅನಗತ್ಯವಾಗಿ ಮತದಾನ ವಿಳಂಬವಾಗಿತ್ತು. ಮತದಾರರು ನಾಲ್ಕು ಗಂಟೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.
ಹಲವು ಮತದಾರರು 6 ಗಂಟೆಯ ಮೊದಲು ಮತಗಟ್ಟೆಗಳಿಗೆ ತಲುಪಿದ್ದರೂ ಅವರಿಗೆ ಮತದಾನ ಮಾಡಲು ಸಾಧ್ಯವಾಗಿಲ್ಲ ಎಂದು ಉಲ್ಲೇಖಿಸಿದ್ದಾರೆ. ಕೆಲವು ಕಡೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದೂ ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯು ತೃಪ್ತಿಕರವಾಗಿತ್ತು ಎಂದು ಮುಖ್ಯ ಚುನಾವಣಾ ಅಧಿಕಾರಿ ಹೇಳಿಕೆ ನೀಡಿದ ಮರುದಿನ ಸತೀಶನ್ ಅವರು ಈ ಆರೋಪ ಮಾಡಿದ್ದಾರೆ.