ಕಾಸರಗೋಡು: ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿ, ಅಭ್ಯರ್ಥಿಗಳಾದ ಎಂ ಎಲ್ ಅಶ್ವಿನಿ, ರಾಜ್ ಮೋಹನ್ ಉಣ್ಣಿತ್ಥಾನ್ ಮತ್ತು ಎಂ ವಿ ಬಾಲಕೃಷ್ಣನ್ ಅವರಿಗೆ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಸುಫಿಯಾನ್ ಅಹಮ್ಮದ್ ಕಾರಣ ತಿಳಿಸಲು ನೋಟಿಸ್ ನೀಡಿದ್ದಾರೆ.
ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳನ್ನು ಚುನಾವಣಾ ಪ್ರಚಾರದ ವೇದಿಕೆಯಾಗಿ ಬಳಸಿಕೊಂಡ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿದ 48 ಗಂಟೆಯೊಳಗೆ ಯಾವುದೇ ಪ್ರತಿಕ್ರಿಯೆ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ನೋಡಲ್ ಅಧಿಕಾರಿ ನೋಟಿಸ್‍ನಲ್ಲಿ ಸೂಚಿಸಿದ್ದಾರೆ.




