ಅಸ್ಸಾಂ: ಬಿಜೆಪಿ ಪಕ್ಷವು ಇಡೀ ಭಾರತವನ್ನು ಬಂಧನ ಶಿಬಿರವನ್ನಾಗಿ ಮಾಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಆರೋಪಿಸಿದ್ದಾರೆ.
0
samarasasudhi
ಏಪ್ರಿಲ್ 18, 2024
ಅಸ್ಸಾಂ: ಬಿಜೆಪಿ ಪಕ್ಷವು ಇಡೀ ಭಾರತವನ್ನು ಬಂಧನ ಶಿಬಿರವನ್ನಾಗಿ ಮಾಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಆರೋಪಿಸಿದ್ದಾರೆ.
ಚುನಾವಣಾ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ), ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ನು ರದ್ದುಪಡಿಸಲಾಗುವುದು.
'ಪ್ರಧಾನಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಚುನಾವಣೆಗಳೇ ಇರುವುದಿಲ್ಲ. ನನ್ನ ಜೀವನದಲ್ಲಿ ಕಂಡ ಅತ್ಯಂತ ಅಪಾಯಕಾರಿ ಚುನಾವಣೆ ಇದಾಗಿದೆ' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
'ನಮ್ಮ ಪಕ್ಷವು (ಟಿಎಂಸಿ) ಎಲ್ಲಾ ಧರ್ಮದವರನ್ನು ಪ್ರೀತಿಸುತ್ತದೆ. ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವುದನ್ನು ಬಯಸುವುದಿಲ್ಲ' ಎಂದು ಹೇಳಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಮಮತಾ ತಿಳಿಸಿದ್ದಾರೆ.