ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸ್ವಕ್ಷೇತ್ರ ಕೇರಳದ ವಯನಾಡ್‌ಗೆ ತೆರಳಿದ್ದಾಗ ತಮಿಳುನಾಡಿನ ನೀಲಗಿರಿಯಲ್ಲಿ ಚುನಾವಣಾ ಅಧಿಕಾರಿಗಳು ರಾಹುಲ್ ಅವರಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಾರೆ.
0
samarasasudhi
ಏಪ್ರಿಲ್ 15, 2024
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸ್ವಕ್ಷೇತ್ರ ಕೇರಳದ ವಯನಾಡ್‌ಗೆ ತೆರಳಿದ್ದಾಗ ತಮಿಳುನಾಡಿನ ನೀಲಗಿರಿಯಲ್ಲಿ ಚುನಾವಣಾ ಅಧಿಕಾರಿಗಳು ರಾಹುಲ್ ಅವರಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಾರೆ.
ಹೆಲಿಕಾಪ್ಟರ್ ಲ್ಯಾಂಡ್ ಆದ ಬಳಿಕ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.
ರಾಹುಲ್ ತಮ್ಮ ಲೋಕಸಭಾ ಕ್ಷೇತ್ರವಾದ ಕೇರಳದ ವಯನಾಡಿನಲ್ಲಿ ಸಾರ್ವಜನಿಕ ಸಭೆ ನಡೆಸುತ್ತಿದ್ದಾರೆ ಮತ್ತು ಹಲವಾರು ಪ್ರಚಾರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಹುಲ್ ಗಾಂಧಿ ಸಭೆ, ಸಭೆಗಳಲ್ಲಿ ನಿರತರಾಗಿದ್ದಾರೆ.
ವಯನಾಡ್‌ನ ಸುಲ್ತಾನ್ ಬತ್ತೇರಿಯಲ್ಲಿ ನಡೆದ ರೋಡ್ ಶೋನಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸಿದ್ದರು. ತೆರೆದ ವಾಹನದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಿದ್ದಾರೆ.