HEALTH TIPS

ಕಾಶ್ಮೀರ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಕೇಂದ್ರ ಸಚಿವ ಜನರಲ್ ವಿ ಕೆ ಸಿಂಗ್ ನೇಮಕ ಸಾಧ್ಯತೆ

ನವದೆಹಲಿ: ಕೇಂದ್ರ ಸಚಿವ ಜನರಲ್ ವಿ ಕೆ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಹೊಸ ಲೆಫ್ಟಿನೆಂಟ್ ಗವರ್ನರ್ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಜಮ್ಮು-ಕಾಶ್ಮೀರದ ಹಾಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಘಾಜಿಪುರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ನಿನ್ನೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಜನರಲ್ ವಿ ಕೆ ಸಿಂಗ್ ಅವರನ್ನು ಕಾಶ್ಮೀರ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಬಹುದು ಎಂದು ಮೂಲಗಳು ತಿಳಿಸಿವೆ.

ಜನರಲ್ ವಿಕೆ ಸಿಂಗ್(ನಿವೃತ್ತ) ಅವರು 2014 ರಲ್ಲಿ ಗಾಜಿಯಾಬಾದ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು ಮತ್ತು 2019 ರಲ್ಲಿ ಎರಡನೇ ಬಾರಿ ಗೆಲುವು ಸಾಧಿಸಿದ್ದರು. ಆದರೆ, ಈ ಬಾರಿ ಭಾರತೀಯ ಜನತಾ ಪಕ್ಷ, ಹಾಲಿ ಶಾಸಕ ಅತುಲ್ ಗಾರ್ಗ್ ಅವರಿಗೆ ಟಿಕೆಟ್ ನೀಡುವುದರೊಂದಿಗೆ ಸಿಂಗ್ ಅವರನ್ನು ಕೈಬಿಡಲಾಗಿದೆ.

ಈ  ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜನರಲ್ ಸಿಂಗ್ ಅವರು ಮಾರ್ಚ್ 24 ರಂದು X ನಲ್ಲಿ ಪೋಸ್ಟ್‌ ಮಾಡಿದ್ದರು. 'ನಾನು ಸೈನಿಕನಾಗಿ ಈ ರಾಷ್ಟ್ರದ ಸೇವೆಗಾಗಿ ನನ್ನ ಸಂಪೂರ್ಣ ಜೀವನವನ್ನು ಮುಡಿಪಾಗಿಟ್ಟಿದ್ದೇನೆ. ಕಳೆದ 10 ವರ್ಷಗಳಿಂದ ಘಾಜಿಯಾಬಾದ್ ಅನ್ನು ವಿಶ್ವದರ್ಜೆಯ ನಗರವನ್ನಾಗಿ ಮಾಡುವ ಕನಸನ್ನು ನನಸು ಮಾಡಲು ಅವಿರತವಾಗಿ ಶ್ರಮಿಸಿದ್ದೇನೆ. ಈ ಪ್ರಯಾಣದಲ್ಲಿ, ನಾನು ದೇಶದ ಜನರಿಂದ, ಗಾಜಿಯಾಬಾದ್‌ನಿಂದ ಮತ್ತು ಬಿಜೆಪಿಯ ಸದಸ್ಯರಿಂದ ಪಡೆದ ನಂಬಿಕೆ ಮತ್ತು ಪ್ರೀತಿಗೆ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries