HEALTH TIPS

ಭಾರತ ಮಾತೆ ಮೇಲೆ ನಂಬಿಕೆ ಇರುವವರಿಗೆ ಪೌರತ್ವ: ಮೋದಿಯ ಗ್ಯಾರಂಟಿಯಾಗಿದೆ; ಪ್ರಧಾನಿ

             ಕೂಚ್ ಬೆಹಾರ್: 'ಇಂಡಿಯಾ' ಮೈತ್ರಿಕೂಟವು ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಕುರಿತು ಅಪಪ್ರಚಾರ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಸಿದ್ದಾರೆ.

              ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಭ್ರಷ್ಟರನ್ನು ರಕ್ಷಿಸಲು ಪ್ರಯತ್ನಿಸುತ್ತಿವೆ ಎಂದು ಟೀಕಿಸಿದ್ದು, ಭ್ರಷ್ಟರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ.

               ಪಶ್ಚಿಮ ಬಂಗಾಳದ ಕೂಚ್‌ ಬಿಹಾರ್‌ನಲ್ಲಿ ಗುರುವಾರ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, 'ದೌರ್ಜನ್ಯಕ್ಕೆ ಒಳಗಾದ ಸಮುದಾಯಗಳನ್ನು ಅವರು (ಇಂಡಿಯಾ ಒಕ್ಕೂಟ) ಕಡೆಗಣಿಸಿದ್ದಾರೆ. ನಾವು ತಂದಿರುವ ಸಿಎಎ ವಿರುದ್ಧ ಅವರು ಸುಳ್ಳು ಹರಡುತ್ತಿದ್ದಾರೆ' ಎಂದು ದೂರಿದರು.

               ಸಂದೇಶ್‌ಖಾಲಿ ಘಟನೆಯನ್ನು ಉಲ್ಲೇಖಿಸಿದ ಪ್ರಧಾನಿ, 'ಸಂದೇಶ್‌ಖಾಲಿ ಪ್ರಕರಣದ ತಪ್ಪಿತಸ್ಥರು ತಮ್ಮ ಜೀವನದ ಇನ್ನುಳಿದ ಅವಧಿಯನ್ನು ಜೈಲಿನಲ್ಲಿ ಕಳೆಯಲಿದ್ದಾರೆ' ಎಂದರು.

'ಬಂಗಾಳದಲ್ಲಿ ಮಹಿಳೆಯರು ಎದುರಿಸುತ್ತಿರುವ ದೌರ್ಜನ್ಯವನ್ನು ಕೊನೆಗಾಣಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ಸಂದೇಶ್‌ಖಾಲಿ ಘಟನೆಯ ಹಿಂದಿರುವವರನ್ನು ರಕ್ಷಿಸಲು ಟಿಎಂಸಿ ಹೇಗೆ ಪ್ರಯತ್ನಿಸಿದೆ ಎಂಬುದನ್ನು ಇಡೀ ದೇಶವೇ ನೋಡಿದೆ. ಸಂದೇಶ್‌ಖಾಲಿ ಮಹಿಳೆಯರಿಗೆ ಇಂತಹ ಸ್ಥಿತಿ ಎದುರಾಗಲು ಟಿಎಂಸಿಯ ದುರಾಡಳಿತವೇ ಕಾರಣ' ಎಂದು ಟೀಕಿಸಿದರು.

             'ಭ್ರಷ್ಟರಿಗೆ ಶಿಕ್ಷೆಯಾಗುವುದನ್ನು ನಾನು ಖಾತರಿಪಡಿಸುತ್ತೇನೆ. ಬಡವರಿಗೆ ನ್ಯಾಯ ಸಿಗಬೇಕು. ಮುಂದಿನ ಐದು ವರ್ಷಗಳಲ್ಲಿ ಭ್ರಷ್ಟರ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು' ಎಂದು ಎಚ್ಚರಿಕೆ ನೀಡಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries