ಕಾಸರಗೋಡು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಏ. 12ರಂದು ಮಧ್ಯಾಹ್ನ 3.30ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲೆಯಲ್ಲಿ ಅಸೌಖ್ಯಬಾಧಿತರಾಗಿದ್ದು, ಮತದಾರರ ಪಟ್ಟಿಯಲ್ಲಿ ನಮೂದಿಸಲ್ಪಟ್ಟಿರುವವರು, 85 ವರ್ಷ ದಾಟಿದ ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಕುರಿತು ವಿವರಣೆ ನೀಡುವ ನಿಟ್ಟಿನಲ್ಲಿ ಸಭೆ ಆಯೋಜಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ನೇರವಾಗಿ ಇಂತಹ ಮನೆಗಳಿಗೆ ತಲುಪಿ ಮತದಾನ ನಡೆಸುವ ಹಾಗೂ ಇವುಗಳನ್ನು ಸುರಕ್ಷಿತವಾಗಿ ದಾಸ್ತಾನಿರುಸುವ ವಿಧಾನದ ಬಗ್ಗೆ ಮಾಹಿತಿ ನೀಡಲಾಗುವುದು.

