HEALTH TIPS

ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಸುಳ್ಳು ಸುದ್ದಿ: ಆನ್‍ಲೈನ್ ಚಾನೆಲ್ ವಿರುದ್ಧ ಪ್ರಕರಣ ದಾಖಲು

            ಆಲಪ್ಪುಳ: ತಿರುವನಂತಪುರಂ ಜಿಲ್ಲೆಯಲ್ಲಿ ಬಳಸುವ ವಿದ್ಯುನ್ಮಾನ ಮತಯಂತ್ರಗಳು ದೋಷಪೂರಿತವಾಗಿವೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಆನ್‍ಲೈನ್ ಚಾನೆಲ್ ವಿರುದ್ಧ ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ.

              ತಿರುವನಂತಪುರಂ ಸಿಟಿ ಸೈಬರ್ ಕ್ರೈಂ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚುನಾವಣಾಧಿಕಾರಿಗಳು ಮತ್ತು ರಾಜಕೀಯ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ ಎಂಬ ಸುಳ್ಳು ಸುದ್ದಿಯೂ ಹಬ್ಬಿತ್ತು. ಇದನ್ನು ಗಮನಿಸಿದ ಪೋಲೀಸರು ಕಾನೂನು ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

             ಪ್ರಕರಣ ದಾಖಲಾದ ನಂತರ ಆನ್‍ಲೈನ್ ಚಾನೆಲ್ ಸುದ್ದಿಯನ್ನು ಹಿಂಪಡೆದಿದೆ. ಚುನಾವಣೆಗೆ ಸಂಬಂಧಿಸಿದಂತೆ ದ್ವೇಷಪೂರಿತ ಸುದ್ದಿಗಳನ್ನು ಪೋಸ್ಟ್ ಮಾಡುವವರು ಮತ್ತು ಮಹಿಳೆಯರ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೋಲೀಸರು ತಿಳಿಸಿದ್ದಾರೆ.

              ಚುನಾವಣಾಧಿಕಾರಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ ವ್ಯಕ್ತಿಯನ್ನು ತಿರುವಲ್ಲಾದಲ್ಲಿ ಪೆÇಲೀಸರು ಬಂಧಿಸಿದ್ದಾರೆ. ಇಂತಹ ಸೈಬರ್ ದಾಳಿ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ಇದಕ್ಕಾಗಿ 24 ಗಂಟೆಗಳ ಸೈಬರ್ ಗಸ್ತು ವ್ಯವಸ್ಥೆ ಮಾಡಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries