HEALTH TIPS

ಕಚ್ಚತೀವು ವಿಷಯ ಮುಗಿದ ಅಧ್ಯಾಯ: ಕಾಂಗ್ರೆಸ್‌ ನಾಯಕ ಚಿದಂಬರಂ

              ವದೆಹಲಿ: ಕಚ್ಚತೀವು ದ್ವೀಪ ವಿಷಯ ಮುಗಿದು ಹೋದ ಅಧ್ಯಾಯ. ಚುನಾವಣೆ ಸಮೀಪಿಸುತ್ತಿರುವಾಗ ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್‌ ನಾಯಕ ಚಿದಂಬರಂ ಹೇಳಿದರು.

              ಸುದ್ದಿಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ಪ್ರಸ್ತಾಪಿಸಿ ಅವರು ಮಾತನಾಡಿದರು.

              ಗಡಿಯಲ್ಲಿ ಭಾರತದ ಭೂಪ್ರದೇಶಗಳನ್ನು ಚೀನಾ ಆಕ್ರಮಿಸಿಕೊಳ್ಳುತ್ತಿದ್ದು ದೇಶದ ಜನರ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಕಚ್ಚತೀವು ದ್ವೀಪದ ವಿಷಯವನ್ನು ಚುನಾವಣೆ ಕಾರಣಗಳಿಗೆ ಎತ್ತುತ್ತಿದೆ ಎಂದು ಚಿದಂಬರಂ ಹೇಳಿದರು.

                 ಈ ವಿಷಯ ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯ ಹಾಗೂ ಅಲ್ಲಿನ ತಮಿಳು ಭಾಷಿಕರ ಮೇಲೂ ಗಂಭೀರ ಪರಿಣಾಮ ಬೀರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಚ್ಚತೀವು ದ್ವೀಪದ ವಿಷಯ ಮುಗಿದು ಹೋದ ಅಧ್ಯಾಯವಾಗಿದೆ. 50 ವರ್ಷಗಳ ಹಿಂದೆ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಪ್ರಧಾನಿ ಮೋದಿ 2014ರಿಂದ ಅಧಿಕಾರದಲ್ಲಿದ್ದಾರೆ. ಕಳೆದ 10 ವರ್ಷಗಳಲ್ಲಿ ಅವರು ಈ ವಿಷಯವನ್ನು ಏಕೆ ಎತ್ತಲಿಲ್ಲ? ಎಂದು ಪ್ರಶ್ನೆ ಮಾಡಿದರು.

                 ಲಂಕಾದಲ್ಲಿರುವ ತಮಿಳು ಭಾಷಿಕರ ಮೇಲೆ ಗಂಭೀರ ಪರಿಣಾಮಗಳಾಗಲಿವೆ ಎಂಬುದು ಮೋದಿ ಮತ್ತು ಮಂತ್ರಿಗಳಿಗೆ ಗೊತ್ತಿದ್ದರೂ ಅವರು ಈ ವಿಷಯವನ್ನು ಪ್ರಸ್ತಾಪ ಮಾಡಿದ್ದು ಖಂಡನೀಯ ಎಂದು ಚಿದಂಬರಂ ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries