HEALTH TIPS

ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಸೇವೆಯಿಂದ ವಜಾಗೊಳಿಸಿದ ವಿಜಿಲೆನ್ಸ್ ನಿರ್ದೇಶನಾಲಯ

            ವದೆಹಲಿ: ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಸೇವೆಯಿಂದ ವಜಾಗೊಳಿಸಿ ವಿಜಿಲೆನ್ಸ್ ನಿರ್ದೇಶನಾಲಯ (ಡಿಒವಿ) ಆದೇಶ ಹೊರಡಿಸಿದೆ. ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

             2007ರ ಪ್ರಕರಣವನ್ನು ಉಲ್ಲೇಖಿಸಿ ವಿಜಿಲೆನ್ಸ್‌ನ ವಿಶೇಷ ಕಾರ್ಯದರ್ಶಿ ರಾಜಶೇಖರ್ ಆದೇಶ ಹೊರಡಿಸಿದ್ದಾರೆ.

              ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ಅವರನ್ನು ಏಪ್ರಿಲ್ 9ರಂದು ಬಿಭವ್ ಕುಮಾರ್ ಭೇಟಿಯಾಗಿದ್ದರು.


                ಅಬಕಾರಿ ನೀತಿ ಹಗರಣ ಜತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧವನ್ನು ಎತ್ತಿಹಿಡಿದಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಅರ್ಜಿ ಸಲ್ಲಿಸಿದ್ದರು. ಜಾರಿ ನಿರ್ದೇಶನಾಲವು ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿತ್ತು.

                ಈ ಹಿಂದೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಭವ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries