ರಾಯಪುರ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ ಹತನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
0
samarasasudhi
ಏಪ್ರಿಲ್ 01, 2024
ರಾಯಪುರ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ ಹತನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಜಂಟಿಯಾಗಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಪಿಟಿಐಗೆ ತಿಳಿಸಿದ್ದಾರೆ.
ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಹತ್ಯೆಯಾದವನ ಗುರುತು ಇನ್ನೂ ಪತ್ತೆಯಾಗಿಲ್ಲ. ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದೂ ಅವರು ಹೇಳಿದ್ದಾರೆ.
ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಈ ವರ್ಷ ಇದುವರೆಗೆ 33 ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.