HEALTH TIPS

ನೊಯಿಡಾ | ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ರೀಲ್ಸ್: ಮೂವರ ಬಂಧನ

 ನೊಯಿಡಾ: 'ರೀಲ್ಸ್' ಮಾಡುತ್ತ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಉತ್ತರ ಪ್ರದೇಶದ ನೊಯಿಡಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ನಗರದ ರಸ್ತೆಗಳಲ್ಲಿ ಹೆಲ್ಮೆಟ್ ಧರಿಸದೆ ಹಾಗೂ ಅಜಾಗರೂಕತೆಯಿಂದ ಸ್ಕೂಟರ್‌ ಚಾಲನೆ ಮಾಡಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.

ವಿಡಿಯೊ ಅಶ್ಲೀಲವಾಗಿವೆ ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ ಬಳಿಕ ಮೂವರನ್ನು ಬಂಧಿಸಲಾಗಿದೆ. ಅಲ್ಲದೇ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸದ ಕಾರಣ ₹80,500 ದಂಡ ವಿಧಿಸಲಾಗಿದೆ.

ಮೂವರ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ. ಜಮುನಾ ಪ್ರಸಾದ್‌ ಅಲಿಯಾಸ್‌ ಪಿಯೂಷ್‌ ಎಂಬ ವ್ಯಕ್ತಿ ಅಜಾಗರೂಕತೆಯಿಂದ ಸ್ಕೂಟರ್‌ ಚಲಾಯಿಸುತ್ತಿದ್ದರೆ, ವಿನಿತಾ ಮತ್ತು ಪ್ರೀತಿ ಎಂಬ ಮಹಿಳೆಯರು ಅಶ್ಲೀಲವಾಗಿ ವರ್ತಿಸಿದ್ದರು. ವಿನಿತಾ ಎಂಬಾಕೆಯ ಹೆಸರಿನಲ್ಲಿ ಸ್ಕೂಟರ್‌ ನೊಂದಣಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries