HEALTH TIPS

ವಿಷು ಹಸನುಗೊಳಿಸಲು ಅವತರಿಸುವಳೇ ಗಂಗೆ?: ಇಂದಿನಿಂದ ಗುಡುಗು ಸಹಿತ ಬಿರುಗಾಳಿ ಸಾಧ್ಯತೆ: ಅಧಿಕ ತಾಪಮಾನದ ಎಚ್ಚರಿಕೆ

                    ತಿರುವನಂತಪುರ: ಇಂದಿನಿಂದ 15ರವರೆಗೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಮುಂದಿನ ಎರಡು ದಿನಗಳ ಕಾಲ ಕೇರಳದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

                   14 ರಂದು ಅಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರ್, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲೂ ಇದೇ 15ರಂದು ಮಳೆಯಾಗುವ ಸಾಧ್ಯತೆ ಇದೆ.

                  ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದ ಎಚ್ಚರಿಕೆಯನ್ನೂ ಘೋಷಿಸಲಾಗಿದೆ. 15 ರವರೆಗೆ ಪಾಲಕ್ಕಾಡ್ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್, ತ್ರಿಶೂರ್ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್, ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ, ಕೋಝಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್, ಎರ್ನಾಕುಳಂನಲ್ಲಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ 37 ಡಿಗ್ರಿ ಸೆಲ್ಸಿಯಸ್, ತಿರುವನಂತಪುರಂ, ಆಲಪ್ಪುಳ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್‍ಗೆ ಏರುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries