HEALTH TIPS

ಇಂಡೊನೇಷ್ಯಾಕ್ಕೆ ವಿಶ್ವಸಂಸ್ಥೆಯ ಸ್ಥಾನಿಕ ಸಮನ್ವಯಕರಾಗಿ ಗೀತಾ ಸಭರವಾಲ್ ನೇಮಕ

            ವಿಶ್ವಸಂಸ್ಥೆ: ಇಂಡೊನೇಷ್ಯಾಕ್ಕೆ ವಿಶ್ವಸಂಸ್ಥೆಯ ಸ್ಥಾನಿಕ ಸಮನ್ವಯಕಾರರನ್ನಾಗಿ ಭಾರತದ ಗೀತಾ ಸಭರವಾಲ್ ಅವರನ್ನು ನೇಮಕ ಮಾಡಲಾಗಿದೆ.

             ಸಭರವಾಲ್‌ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಯಂಟೊನಿಯೊ ಗುಟೆರಸ್ ತಿಳಿಸಿದ್ದಾರೆ.

             'ಹವಾಮಾನ ಬದಲಾವಣೆ, ಸುಸ್ಥಿರ ಶಾಂತಿ, ಆಡಳಿತ ಮತ್ತು ಸಾಮಾಜಿಕ ನೀತಿ ಬೆಂಬಲಿಸುವ ಅಭಿವೃದ್ಧಿಯಲ್ಲಿ ಮೂರು ದಶಕಗಳ ಅನುಭವ ಹೊಂದಿರುವ ಗೀತಾ, ಸುಸ್ಥಿರ ಅಭಿವೃದ್ಧಿ ಗುರಿಯನ್ನು (ಎಸ್‌ಡಿಜಿ) ವೇಗಗೊಳಿಸಲು ಡಿಜಿಟಲ್ ತಂತ್ರಜ್ಞಾನ ಮತ್ತು ದತ್ತಾಂಶವನ್ನು ಬಳಸಿಕೊಳ್ಳಲಿದ್ದಾರೆ' ಎಂದು ವಿಶ್ವಸಂಸ್ಥೆಯ ಪ್ರಕಟಣೆ ತಿಳಿಸಿದೆ.

                    ಇಂಡೋನೇಷ್ಯಾ ಸರ್ಕಾರದ ಅನುಮೋದನೆಯೊಂದಿಗೆ ಸಭರವಾಲ್‌ ಅವರನ್ನು ನೇಮಿಸಲಾಗಿದೆ ಎಂದು ಅದು ಹೇಳಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries