ತಿರುವನಂತಪುರ: ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಪ್ರಮುಖರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಗುರುವಾರ ನಾಮಪತ್ರ ಸಲ್ಲಿಸಿದರು.
0
samarasasudhi
ಏಪ್ರಿಲ್ 05, 2024
ತಿರುವನಂತಪುರ: ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಪ್ರಮುಖರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಗುರುವಾರ ನಾಮಪತ್ರ ಸಲ್ಲಿಸಿದರು.
ರಾಜೀವ್ ಅವರು ತಿರುವನಂತಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಕೆ.ಸಿ.ವೇಣುಗೋಲ್ ಅವರು ಆಳಪ್ಪುಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ವಯನಾಡ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್, ತ್ರಿಶ್ಯೂರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರೂ ಉಮೇದುವಾರಿಕೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಸುರೇಂದ್ರನ್ ಅವರು ರೋಡ್ ಶೋ ನಡೆಸಿದರು. ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಾಲ್ಗೊಂಡಿದ್ದರು. ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ. ಕೃಷ್ಣಕುಮಾರ್ ಅವರೂ ನಾಮಪತ್ರ ಸಲ್ಲಿಸಿದರು.
ಹೇಮಾ ಮಾಲಿನಿ ನಾಮಪತ್ರ:
ಬಿಜೆಪಿ ಸಂಸದೆ ಹಾಗೂ ಉತ್ತರಪ್ರದೇಶದ ಮಥುರಾ ಕ್ಷೇತ್ರದ ಅಭ್ಯರ್ಥಿ ಹೇಮಾ ಮಾಲಿನಿ ಅವರು ನಾಮಪತ್ರ ಸಲ್ಲಿಸಿದರು. ರಾಜ್ಯ ಸಚಿವ ಸ್ವತಂತ್ರ ದೇವ್ ಸಿಂಗ್ ಉಪಸ್ಥಿತರಿದ್ದರು.