ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ 'ಸಂಕಲ್ಪ ಪತ್ರ' ವನ್ನು ಇಂದು ಭಾನುವಾರ(ಏ.14) ಬಿಡುಗಡೆ ಮಾಡಲಿದೆ.
0
samarasasudhi
ಏಪ್ರಿಲ್ 14, 2024
ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ 'ಸಂಕಲ್ಪ ಪತ್ರ' ವನ್ನು ಇಂದು ಭಾನುವಾರ(ಏ.14) ಬಿಡುಗಡೆ ಮಾಡಲಿದೆ.
ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯುವ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.
ಬಿಜೆಪಿ ಸರ್ಕಾರವು ಅಯೋಧ್ಯೆ ರಾಮಮಂದಿರ ನಿರ್ಮಾಣ ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸುವುದು ಸೇರಿದಂತೆ ತನ್ನ ಪ್ರಮುಖ ಸೈದ್ಧಾಂತಿಕ ಭರವಸೆಗಳನ್ನು ಈಡೇರಿಸಿರುವುದರಿಂದ, ಈ ಬಾರಿಯ ಪ್ರಣಾಳಿಕೆಯಲ್ಲಿ ಸಂಸ್ಕೃತಿ ಮತ್ತು ಹಿಂದುತ್ವಕ್ಕೆ ಸಂಬಂಧಿಸಿದ ಯಾವೆಲ್ಲಾ ಕಾರ್ಯಸೂಚಿಗಳು ಇರಲಿವೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಯುವಕರು, ಮಹಿಳೆಯರು, ರೈತರು ಮತ್ತು ಬಡವರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಭರವಸೆಯೂ ಪ್ರಣಾಳಿಕೆಯಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಬಿಜೆಪಿಯು ಪ್ರಣಾಳಿಕೆ ಸಿದ್ಧಪಡಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಮಿತಿಯನ್ನು ನೇಮಕ ಮಾಡಿತ್ತು.