ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.
0
samarasasudhi
ಏಪ್ರಿಲ್ 04, 2024
ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.
'ಕೆಲವೊಮ್ಮೆ ವೈಯಕ್ತಿಕ ಹಿತಾಸಕ್ತಿಗಿಂತ ರಾಷ್ಟ್ರೀಯ ಹಿತಾಸಕ್ತಿ ಮುಖ್ಯವಾಗಿರಬೇಕು. ನ್ಯಾಯಾಲಯವಾಗಿ ನಾವು ಕಾನೂನಿನ ಚೌಕಟ್ಟಿನೊಳಗೆ ಹೋಗಬೇಕು. ನೀವು ಹೇಳಿದಂತೆ ಪರಿಹಾರ ನೀಡಲು ಸಾಧ್ಯವಿಲ್ಲ. ಹಾಗಾಗಿ ನೀವು ಕಾನೂನಿನ ಚೌಕಟ್ಟಿನೊಳಗೆ ಸೂಕ್ತವಾದ ಕಾನೂನು ಪ್ರಾಧಿಕಾರ ಅಥವಾ ವೇದಿಕೆಯ ಮುಂದೆ ಹೋಗಬೇಕು' ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿ.ಎಸ್ ಅರೋರಾ ಅವರಿದ್ದ ಪೀಠ ಸೂಚಿಸಿದೆ.
ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಇದೇ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ತೀಚೆಗೆ ವಜಾಗೊಳಿಸಿರುವುದಾಗಿ ಪೀಠ ಹೇಳಿದೆ. ಹೀಗಾಗಿ, ವಿಭಿನ್ನ ನಿಲುವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.
ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯ ನಿರಾಕರಿಸಿದ್ದರಿಂದ, ಅರ್ಜಿದಾರ ವಿಷ್ಣು ಗುಪ್ತಾ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಅವರು ಲೆಫ್ಟಿನೆಂಟ್ ಗವರ್ನರ್ ಅವರನ್ನು ಸಂಪರ್ಕಿಸುವುದಾಗಿ ಹೇಳಿದ್ದಾರೆ.