ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗುವ ಮತಗಳನ್ನು ವೆರಿಫೈಯಲ್ ಪೇಪರ್ ಆಡಿಟ್ ಟ್ರಯಲ್(ವಿವಿಪಿಎಟಿ) ಮೂಲಕ ಸಂಪೂರ್ಣ ಪರಿಶೀಲನೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತಾದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
0
samarasasudhi
ಏಪ್ರಿಲ್ 19, 2024
ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗುವ ಮತಗಳನ್ನು ವೆರಿಫೈಯಲ್ ಪೇಪರ್ ಆಡಿಟ್ ಟ್ರಯಲ್(ವಿವಿಪಿಎಟಿ) ಮೂಲಕ ಸಂಪೂರ್ಣ ಪರಿಶೀಲನೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತಾದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ಅರ್ಜಿಗಳ ಕುರಿತಂತೆ ಚುನಾವಣಾ ಆಯೋಗದ ಪ್ರತಿಕ್ರಿಯೆ ಆಲಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ನೇತೃತ್ವದ ವಿಭಾಗೀಯ ಪೀಠವು ತೀರ್ಪನ್ನು ಕಾಯ್ದಿರಿಸಿದೆ.
ವಿವಿಪ್ಯಾಟ್ ಯಂತ್ರಗಳಲ್ಲಿನ ಪಾರದರ್ಶಕ ಗಾಜನ್ನು ದಲಾಯಿಸಿ ಅಪಾರದರ್ಶಕ ಗಾಜು ಅಳವಡಿಸಿದ 2017ರ ಚುನಾವಣಾ ಆಯೋಗದ ನಿರ್ಧಾರವನ್ನು ರದ್ದುಗೊಳಿಸುವಂತೆಯೂ ಅರ್ಜಿದಾರರು ಕೋರಿದ್ದಾರೆ. ಬದಲಾದ ಗಾಜಿನ ಮೂಲಕ ಮತದಾರರು ಏಳು ಸೆಕೆಂಡುಗಳ ಕಾಲ ಲೈಟ್ ಆನ್ ಆಗಿರುವಾಗ ಮಾತ್ರ ಮತದಾನ ಮಾಡಿದ ಟಿಯನ್ನು ನೋಡಬಹುದಾಗಿದೆ.
ಚುನಾವಣಾ ಆಯೋಗದ ಪರ ಹಾಜರಾಗಿದ್ದ ಹಿರಿಯ ವಕೀಲ ಮಣಿಂದರ್ ಸಿಂಗ್, ಇವಿಎಂ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ನ್ಯಾಯಾಲಯಕ್ಕೆ ವಿವರಿಸಿದರು.
ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಮತ್ತು ಗೋಪಾಲ್ ಶಂಕರನಾರಾಯಣನ್ ವಾದ ಮಂಡಿಸಿದ್ದರು.
ಏಪ್ರಿಲ್ 16ರಂದು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕುರಿತಾದ ಟೀಕೆಗಳು ಮತ್ತು ಮತ್ತೆ ಮತಪತ್ರಗಳ ಮೂಲಕ ಮತದಾನ ನಡೆಸಬೇಕೆಂಬ ಮನವಿಗಳನ್ನು ನ್ಯಾಯಾಲಯ ತಳ್ಳಿಹಾಕಿತ್ತು.
ಭಾರತದಲ್ಲಿ ಚುನಾವಣಾ ಪ್ರಕ್ರಿಯೆಯು ಬೃಹತ್ ಪ್ರಮಾಣದ್ದಾಗಿದ್ದು, ಇರುವ ವ್ಯವಸ್ಥೆಯನ್ನು ಉರುಳಿಸುವ ಪ್ರಯತ್ನ ಮಾಡಬಾರದು ಎಂದು ಹೇಳಿತ್ತು.