HEALTH TIPS

ನಮ್ಮ ಕ್ಷೇತ್ರದ ಅಭ್ಯರ್ಥಿಗಳ ಜಾತಕ ತಿಳಿಯಬೇಕೇ?: KYC ಅಪ್ಲಿಕೇಶನ್ ಮೂಲಕ ತಿಳಿದುಕೊಳ್ಳಿ

                  ತಿರುವನಂತಪುರಂ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಮತದಾರರು ಕೆವೈಸಿ (ನಿಮ್ಮ ಅಭ್ಯರ್ಥಿಯನ್ನು ತಿಳಿದುಕೊಳ್ಳಿ) ಆ್ಯಪ್ ಬಳಸಬಹುದು ಎಂದು ಮುಖ್ಯ ಚುನಾವಣಾಧಿಕಾರಿ ಸಂಜಯ್ ಕೌಲ್ ಹೇಳಿದ್ದಾರೆ.

              ಲೋಕಸಭೆ ಚುನಾವಣೆಯಲ್ಲಿ ಪಾರದರ್ಶಕತೆ ಮತ್ತು ಜನಪ್ರತಿನಿಧಿಯಾಗಲಿರುವ ವ್ಯಕ್ತಿಯ ಬಗ್ಗೆ ಮತದಾರರು ಸರಿಯಾದ ನಿರ್ಧಾರ ಕೈಗೊಳ್ಳಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆವೈಸಿ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಮತದಾರರು ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಎಲ್ಲ ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಆಪಾದಿತ ಅಪರಾಧದ ಸ್ವರೂಪ ಮತ್ತು ಪ್ರಕರಣದ ಪ್ರಸ್ತುತ ಸ್ಥಿತಿಯನ್ನು ಆ್ಯಪ್ ಮೂಲಕ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಅಭ್ಯರ್ಥಿಯು ಸಲ್ಲಿಸಿದ ಅಫಿಡವಿಟ್ ಅನ್ನು ನಾಮಪತ್ರದ ಜೊತೆಗೆ ಡೌನ್‍ಲೋಡ್ ಮಾಡಿಕೊಳ್ಳಬಹುದು.


            ಅಪ್ಲಿಕೇಶನ್ Android  ಮತ್ತು  iOS ಪ್ಲಾಟ್‍ಫಾರ್ಮ್‍ಗಳಲ್ಲಿ ಲಭ್ಯವಿದೆ. ಗೂಗಲ್ ಪ್ಲೇ ಸ್ಟೋರ್ ಅಥವಾ ಆ್ಯಪಲ್ ಆಪ್ ಸ್ಟೋರ್ ನಿಂದ ಆ್ಯಪ್ ಡೌನ್ ಲೋಡ್ ಮಾಡಿಕೊಂಡು ಇನ್ ಸ್ಟಾಲ್ ಮಾಡಿಕೊಂಡ ನಂತರ ಲೋಕಸಭೆ ಚುನಾವಣೆ ಆಯ್ಕೆ ಮಾಡಿಕೊಂಡು ಕ್ಷೇತ್ರವನ್ನು ಪ್ರವೇಶಿಸಿದರೆ ಅಲ್ಲಿ ಸ್ಪರ್ಧಿಸಿರುವ ಎಲ್ಲ ಅಭ್ಯರ್ಥಿಗಳ ಮಾಹಿತಿ ಲಭ್ಯವಾಗುತ್ತದೆ. ಅಭ್ಯರ್ಥಿಗಳ ಹೆಸರನ್ನು ಟೈಪ್ ಮಾಡುವ ಮೂಲಕವೂ ಹುಡುಕಾಟ ನಡೆಸಬಹುದು.

          ಒಂದೊಮ್ಮೆ ಮತದಾರರು ಅಭ್ಯರ್ಥಿಯ ಬಗ್ಗೆ ಹೆಚ್ಚು ಅರ್ಥ ಮಾಡಿಕೊಂಡರೆ, ಆ ಮಾಹಿತಿಯ ಆಧಾರದ ಮೇಲೆ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಮತ್ತು ಇದು ಪ್ರಜಾಪ್ರಭುತ್ವವನ್ನು ಇನ್ನಷ್ಟು ಸುಧಾರಿಸುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries