ಮಧೂರು: ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಭೆ ಜೂನ್ 2 ರಂದು ಭಾನುವಾರ ಬೆಳಗ್ಗೆ 10 ಕ್ಕೆ ಮಠಾಧಿಪತಿಗಳು, ಧಾರ್ಮಿಕ ನೇತಾರರು, ಮಲಬಾರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎಂ.ಆರ್.ಮುರಳಿ ಹಾಗು ಸಹಾಯಕ ಕಮಿಷನರ್ ಪ್ರದೀಪ್ ಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಬ್ರಹ್ಮಕಲಶೋತ್ಸವದ ದಿನಾಂಕವನ್ನು ತೀರ್ಮಾನಿಸಿ ಪ್ರಕಟಿಸಲಾಗುವುದು. ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು, ನವೀಕರಣ ಸಮಿತಿ ಸದಸ್ಯರು ಹಾಗು ಊರ ಪರವೂರ ಭಕ್ತ ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಾಧ್ಯಮ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.


