HEALTH TIPS

ಮದ್ರಾಸ್‌ ಐಐಟಿಗೆ ಹಳೆಯ ವಿದ್ಯಾರ್ಥಿಗಳು, ಕೈಗಾರಿಕೆಗಳಿಂದ ₹513 ಕೋಟಿ ದೇಣಿಗೆ

         ವದೆಹಲಿ: ಮದ್ರಾಸ್‌ ಐಐಟಿ 2023-24ನೇ ಸಾಲಿನಲ್ಲಿ ಹಳೆಯ ವಿದ್ಯಾರ್ಥಿಗಳು, ಕೈಗಾರಿಕೆಗಳು ಮತ್ತು ದಾನಿಗಳಿಂದ ₹513 ಕೋಟಿ ದೇಣಿಗೆ ಪಡೆದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.

            ಜೊತೆಗೆ ಹಳೆಯ ವಿದ್ಯಾರ್ಥಿಗಳು ಮತ್ತು ಕೈಗಾರಿಕೋದ್ಯಮಿಗಳು ಇನ್ನೂ ₹717 ಕೋಟಿ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದೂ ತಿಳಿಸಿದ್ದಾರೆ.

             ಸತತ ಎರಡನೇ ಬಾರಿಗೆ ಐಐಟಿಯು ಆರ್ಥಿಕ ವರ್ಷವೊಂದರಲ್ಲಿ ದಾಖಲೆಯ ದೇಣಿಗೆ ಪಡೆದಿದೆ.

2022-23ನೇ ಸಾಲಿನಲ್ಲಿ ಐಐಟಿಯು ₹218 ಕೋಟಿ ದೇಣಿಗೆ ಸ್ವೀಕರಿಸಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಶೇ 135ರಷ್ಟು ಹೆಚ್ಚು ದೇಣಿಗೆ ಪಡೆದಿದೆ.

                  ಸ್ವೀಕರಿಸಿದ ದೇಣಿಗೆಯನ್ನು ತಾಂತ್ರಿಕ ಸಂಶೋಧನೆ ಮತ್ತು ಅಭಿವೃದ್ಧಿಗೆ ಬಳಸಲಾಗುತ್ತಿದೆ. ಹಾಗೆಯೇ ಅರ್ಹ ವಿದ್ಯಾರ್ಥಿಗಳನ್ನು ಬೆಂಬಲಿಸಲು, ಅವರಿಗೆ ವಿದ್ಯಾರ್ಥಿವೇತನ ನೀಡಲು ಬಳಸಲಾಗುತ್ತದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries