ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಉಜನಿ ಜಲಾಶಯದ ಹಿನ್ನೀರಿನಲ್ಲಿ ದೋಣಿ ಮುಳುಗಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
0
samarasasudhi
ಮೇ 22, 2024
ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಉಜನಿ ಜಲಾಶಯದ ಹಿನ್ನೀರಿನಲ್ಲಿ ದೋಣಿ ಮುಳುಗಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲಾಶಿ ಮತ್ತು ಭುಗಾವ್ ಗ್ರಾಮಗಳ ನಡುವೆ ದೋಣಿ ಸಂಚರಿಸುತ್ತಿತ್ತು. ಮಂಗಳವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಏಳು ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಪಲ್ಟಿಯಾಗಿದೆ.
ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಪುರುಷರು, ಇಬ್ಬರು ಮಹಿಳೆಯರು ಕೊನೆಯುಸಿರೆಳೆದಿದ್ದಾರೆ ಎಂದು ಇಂದಾಪುರ ತಹಶೀಲ್ದಾರ್ ಶ್ರೀಕಾಂತ್ ಪಾಟೀಲ್ ತಿಳಿಸಿದ್ದಾರೆ.
ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತದ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.