ನವದೆಹಲಿ: ಆರೋಗ್ಯದ ಆಧಾರದ ಮೇಲೆ ಮಧ್ಯಂತರ ಜಾಮೀನನ್ನು 7 ದಿನಗಳ ಕಾಲ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
0
samarasasudhi
ಮೇ 27, 2024
ನವದೆಹಲಿ: ಆರೋಗ್ಯದ ಆಧಾರದ ಮೇಲೆ ಮಧ್ಯಂತರ ಜಾಮೀನನ್ನು 7 ದಿನಗಳ ಕಾಲ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನಿನ ಆಧಾರದ ಮೇಲೆ ಜೈಲಿನಿಂದ ಹೊರಗಿದ್ದಾರೆ.
ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು. ಜತೆಗೆ ಲೆಫ್ಟಿನೆಂಟ್ ಗವರ್ನರ್ ಅವರ ಅನುಮೋದನೆ ಅಗತ್ಯವಿಲ್ಲದಿದ್ದಲ್ಲಿ ಕಚೇರಿ ಅಥವಾ ದೆಹಲಿ ಸಚಿವಾಲಯಕ್ಕೆ ಭೇಟಿ ನೀಡಕೂಡದು ಮತ್ತು ಅಧಿಕೃತ ಕಡತಗಳಿಗೆ ಸಹಿ ಮಾಡಬಾರದು ಎಂದು ನಿರ್ಬಂಧ ವಿಧಿಸಿತ್ತು.
'ಕೇಜ್ರಿವಾಲ್ ಅವರ ದೇಹದ ತೂಕ ಏಳು ಕೆ.ಜಿ ಕಡಿಮೆಯಾಗಿದ್ದು, ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ. ಈ ಉದ್ದೇಶಕ್ಕಾಗಿ ಜೂನ್ 1 ರಂದು ಕೊನೆಗೊಳ್ಳುವ ಮಧ್ಯಂತರ ಜಾಮೀನನ್ನು ಇನ್ನು ಏಳು ದಿನಗಳ ಕಾಲ ವಿಸ್ತರಿಸಬೇಕು' ಎಂದು ಸುಪ್ರೀಂ ಕೋರ್ಟ್‌ಗೆ ಮನವಿಯಲ್ಲಿ ತಿಳಿಸಲಾಗಿದೆ.