ನವದೆಹಲಿ: ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಅವರ ಮೇಲೆ ಹಲ್ಲೆ ನಡೆದಿರುವುದು ಖಚಿತಪಟ್ಟಿದೆ ಎಂದು ವೈದ್ಯಕೀಯ ವರದಿ ಹೇಳಿದೆ.
0
samarasasudhi
ಮೇ 18, 2024
ನವದೆಹಲಿ: ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಅವರ ಮೇಲೆ ಹಲ್ಲೆ ನಡೆದಿರುವುದು ಖಚಿತಪಟ್ಟಿದೆ ಎಂದು ವೈದ್ಯಕೀಯ ವರದಿ ಹೇಳಿದೆ.
ಶನಿವಾರ ಸ್ವಾತಿ ಮಾಲಿವಾಲ್ ಅವರ ವೈದ್ಯಕೀಯ ವರದಿ ಬಂದಿದ್ದು, ಅದರ ಪ್ರಕಾರ ಎಡಗಾಲಿಗೆ ಮತ್ತು ಬಲ ಕೆನ್ನೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗಿದೆ.
ಏಮ್ಸ್ ವೈದ್ಯರು ಈ ವೈದ್ಯಕೀಯ ವರದಿ ನೀಡಿದ್ದಾರೆ.
'ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಭಿಭವ್ ಕುಮಾರ್ ನನಗೆ ಹಲವು ಬಾರಿ ಬಲವಾಗಿ ಒದ್ದಿದ್ದಲ್ಲದೇ, ಏಳೆಂಟು ಬಾರಿ ಕಪಾಳಕ್ಕೂ ಹೊಡೆದಿದ್ದಾನೆ' ಎಂದು ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಅವರು ಆರೋಪಿಸಿ ದ್ದಾರೆ. ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಇದು ನಡೆದಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.