ತಿರುವನಂತಪುರಂ: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಾಳೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆ ಮತ್ತು ಸೋಮವಾರ ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಣ್ಣೂರು ಕಾಸರಗೋಡು ಸಹಿತ 12 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಎಚ್ಚರಿಕೆ ನೀಡಲಾಗಿದೆ.
ಪತ್ತನಂತಿಟ್ಟ ಇಡುಕ್ಕಿ ಮಲಪ್ಪುರಂ ಜಿಲ್ಲೆಗಳಲ್ಲಿ ಇಂದು ಆರೆಂಜ್ ಘೋಷಿಸಲಾಗಿತ್ತು. ತಿರುವನಂತಪುರಂ, ಕೊಲ್ಲಂ, ಆಲಪ್ಪುಳ ಮತ್ತು ಎರ್ನಾಕುಳಂ ಜಿಲ್ಲೆಗಳಲ್ಲಿ 19 ಮತ್ತು 20 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 21 ರಂದು ತಿರುವನಂತಪುರಂನಿಂದ ಪಾಲಕ್ಕಾಡ್‍ವರೆಗಿನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 22 ರಂದು ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಳೆಯ ಜೊತೆಗೆ ಜೋರು ಗಾಳಿ, ಸಿಡಿಲು, ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ಈ ಎಲ್ಲ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ ಎಂದು ಸೂಚಿಸಲಾಗಿದೆ.




.webp)
