HEALTH TIPS

ಹರಿಯಾಣ ಸರ್ಕಾರ ಬಿಕ್ಕಟ್ಟು: ಬೆಂಬಲ ವಾಪಸ್ ಪಡೆದ ಮೂವರು ಪಕ್ಷೇತರ ಶಾಸಕರು

           ಚಂಡೀಗಢ (PTI): ಹರಿಯಾಣದಲ್ಲಿ ಮೂವರು ಪಕ್ಷೇತರ ಶಾಸಕರು ನಯಾಬ್‌ ಸಿಂಗ್‌ ಸೈನಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿದ್ದಾರೆ.

              ಶಾಸಕರಾದ ಸೋಮ್‌ಬೀರ್‌ ಸಂಗವಾನ್‌, ರಣಧೀರ್‌ ಗೋಲೆನ್‌ ಮತ್ತು ಧರ್ಮಪಾಲ್‌ ಗೋಂದರ್‌ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸುವುದಾಗಿ ಘೋಷಿಸಿದ್ದಾರೆ.                

        ರೋಹ್ಟಕ್‌ನಲ್ಲಿ ಸುದ್ದಿಗೋಷ್ಠಿ ಕರೆದು ತಮ್ಮ ನಿರ್ಧಾರವನ್ನು ಅವರು ಪ್ರಕಟಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್‌ ಹೂಡಾ ಮತ್ತು ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥ ಉದಯ್‌ ಭಾನ್‌ ಉಪಸ್ಥಿತರಿದ್ದರು.

              ರೈತರಿಗೆ ಸಂಬಂಧಿಸಿದ ವಿಷಯ ಸೇರಿದಂತೆ ಹಲವು ವಿಷಯಗಳಿಂದ ಪ್ರಭಾವಿತರಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಗೋಂದರ್‌ ತಿಳಿಸಿದರು.

               'ಪ್ರಸ್ತುತ ಹರಿಯಾಣ ವಿಧಾಸಭೆಯ ಒಟ್ಟು ಸದಸ್ಯರ ಸಂಖ್ಯೆ 88. ಈ ಪೈಕಿ ಬಿಜೆಪಿ 40 ಸದಸ್ಯರನ್ನು ಹೊಂದಿದೆ. ಈ ಮೂಲಕ ಸೈನಿ ನೇತೃತ್ವದ ಸರ್ಕಾರ ಬಹುಮತ ಕಳೆದುಕೊಂಡಿದೆ. ಈ ಕೂಡಲೇ ಅವರು ರಾಜೀನಾಮೆ ಸಲ್ಲಿಸಬೇಕು. ಶೀಘ್ರವೇ ವಿಧಾನಸಭೆ ಚುನಾವಣೆ ನಡೆಸಬೇಕು' ಎಂದು ಉದಯ್‌ ಭಾನ್‌ ಆಗ್ರಹಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries