ನವದೆಹಲಿ: ಪ್ರಸಕ್ತ ಸಾಗುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
0
samarasasudhi
ಮೇ 10, 2024
ನವದೆಹಲಿ: ಪ್ರಸಕ್ತ ಸಾಗುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ಜೂನ್ 2ರಂದು ಜೈಲಿಗೆ ಶರಣಾಗಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರಿದ್ದ ಪೀಠ ಸೂಚಿಸಿದೆ.
ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಜೂನ್ 5ರವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಬೇಕು ಎಂದು ಕೇಜ್ರಿವಾಲ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಮನವಿ ಮಾಡಿದರು. ಅದರೆ ಇದನ್ನು ಪೀಠ ತಳ್ಳಿ ಹಾಕಿತು.
ಪ್ರಕರಣದಲ್ಲಿ ತನ್ನ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಳ್ಳಿ ಹಾಕಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.