ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.
2014ರಲ್ಲಿ ಮೊದಲ ಬಾರಿಗೆ ಗೆದ್ದಿದ್ದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಮೂರನೇ ಬಾರಿಗೆ ಆಯ್ಕೆಯಾಗುವ ಭರವಸೆಯನ್ನು ಪ್ರಧಾನಿ ವ್ಯಕ್ತಪಡಿಸಿದ್ದಾರೆ.
'ಕಾಶಿಯೊಂದಿಗಿನ ನನ್ನ ಸಂಬಂಧ ಬೇರ್ಪಡಿಸಲಾಗದಂತದ್ದು. ಪದಗಳಲ್ಲಿ ಅದನ್ನು ವರ್ಣಿಸಲು ಸಾಧ್ಯವಿಲ್ಲ' ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.
ನಾಮಪತ್ರ ಸಲ್ಲಿಸುವುದಕ್ಕೂ ಒಂದು ದಿನ ಮುನ್ನ ವಾರಾಣಸಿಯಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದ್ದಾರೆ.
ವಾರಾಣಸಿಯಲ್ಲಿ ಜೂನ್ 1 ರಂದು 7ನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಕಣದಲ್ಲಿದ್ದಾರೆ.





