ನವದೆಹಲಿ: ದೆಹಲಿಯ ಕರೋಲ್ ಬಾಗ್ ಮತ್ತು ಝಾಂಡೇವಾಲಾನ್ ಮೆಟ್ರೊ ನಿಲ್ದಾಣಗಳ ಕೆಲವು ಕಂಬಗಳ ಮೇಲೆ ಖಲಿಸ್ತಾನ ಪರ ಬರಹಗಳನ್ನು ಬರೆದಿರುವುದು ಪತ್ತೆಯಾಗಿದೆ. ಅಲ್ಲದೇ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಘೋಷಣೆಗಳನ್ನು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0
samarasasudhi
ಮೇ 13, 2024
ನವದೆಹಲಿ: ದೆಹಲಿಯ ಕರೋಲ್ ಬಾಗ್ ಮತ್ತು ಝಾಂಡೇವಾಲಾನ್ ಮೆಟ್ರೊ ನಿಲ್ದಾಣಗಳ ಕೆಲವು ಕಂಬಗಳ ಮೇಲೆ ಖಲಿಸ್ತಾನ ಪರ ಬರಹಗಳನ್ನು ಬರೆದಿರುವುದು ಪತ್ತೆಯಾಗಿದೆ. ಅಲ್ಲದೇ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಘೋಷಣೆಗಳನ್ನು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬರಹ ಮತ್ತು ಘೋಷಣೆಗಳನ್ನು ಅಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ಈ ಬಗ್ಗೆ ತನಿಖೆ ಮಾಡಲು ತಂಡಗಳನ್ನು ರಚಿಸಿದ್ದೇವೆ. ಅಪರಾಧಿಗಳ ಪತ್ತೆಗಾಗಿ ಪೊಲೀಸ್ ತಂಡಗಳು ಮೆಟ್ರೊ ನಿಲ್ದಾಣಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿವೆ' ಎಂದು ಅವರು ಮಾಹಿತಿ ನೀಡಿದ್ದಾರೆ.