HEALTH TIPS

ಅಬಕಾರಿ ಹಗರಣ : ಎಎಪಿ ಕೂಡ ಆರೋಪಿ: ಕೋರ್ಟ್‌ಗೆ ಇ.ಡಿ ಹೇಳಿಕೆ

           ವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಆರೋಪಿಯಾಗಿ ಹೆಸರಿಸಲಾಗುವುದು ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿತು..

            ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರಿಗೆ ಜಾಮೀನು ನೀಡುವುದನ್ನು ವಿರೋಧಿಸುವ ಸಂದರ್ಭದಲ್ಲಿ ಇ.ಡಿ ಪರ ವಕೀಲರು ಕೋರ್ಟ್‌ಗೆ ಈ ಕುರಿತು ಮಾಹಿತಿ ನೀಡಿದರು.

            ಪ್ರಕರಣ ಕುರಿತು ದೋಷಾರೋಪ ಪಟ್ಟಿ ಸಲ್ಲಿಸುವಾಗ ಎಎಪಿ ಅನ್ನೂ ಸಹ ಆರೋಪಿಯಾಗಿ ಹೆಸರಿಸಲಾಗುವುದು ಎಂದು ವಕೀಲರು ಈ ಪ್ರಕರಣದ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸ್ವರಣಕಾಂತಾ ಶರ್ಮಾ ಅವರಿಗೆ ತಿಳಿಸಿದರು.

               ಸಿಸೋಡಿಯಾ ಅವರಿಗೆ ಜಾಮೀನು ನೀಡಬೇಕು ಎಂದು ವಾದಿಸಿದ ಅವರ ‍ಪರ ವಕೀಲರು, 'ಹಣ ಅಕ್ರಮ ವರ್ಗಾವಣೆ ಹಾಗೂ ಭ್ರಷ್ಟಾಚಾರ ಪ್ರಕರಣ ಸಂಬಂಧ ಇ.ಡಿ. ಇನ್ನೂ ಜನರನ್ನು ಬಂಧಿಸುತ್ತಿದೆ. ವಾದ ಮುಗಿಯುವ ಯಾವುದೇ ಸೂಚನೆಗಳಿಲ್ಲ' ಎಂದು ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries