ಬದಿಯಡ್ಕ: ಕುಂಟಿಕಾನಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅವಲೋಕನ ಸಭೆ ಶ್ರೀಕ್ಷೇತ್ರದಲ್ಲಿ ಜರಗಿತು. ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಬಿ.ವಸಂತ ಪೈ ಬದಿಯಡ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳಲು ಸಿಕ್ಕಿರುವ ಅವಕಾಶವೇ ನಮ್ಮ ಪಾಲಿಗೆ ಬಂದೊದಗಿದ ಭಾಗ್ಯವಾಗಿದೆ. ಅಚ್ಚುಕಟ್ಟಾಗಿ ನಡೆದ ಕಾರ್ಯಕ್ರಮದಲ್ಲಿ ಕೈಜೋಡಿಸಿದ ಭಗವದ್ಭಕ್ತರ ಸಹಕಾರವನ್ನು ಎಂದೂ ಮರೆಯುವಂತಿಲ್ಲ. ಮುಂದಿನ ದಿನಗಳಲ್ಲಿ ಕ್ಷೇತ್ರವು ಇನ್ನಷ್ಟು ಅಭಿವೃದ್ಧಿಯನ್ನು ಕಾಣಲಿದೆ ಎಂದರು.
ದೇವಸ್ಥಾನ ಅಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ವಿ.ಬಿ.ಕುಳಮರ್ವ, ಫಿಟ್ ಪರ್ಸನ್ ಹಾಗೂ ಕೋಶಾಧಿಕಾರಿ ರಮಾನಾಥ ಶೆಟ್ಟಿ, ಉಪಾಧ್ಯಕ್ಷ ಎಂ.ವಿ.ಮಹಾಲಿಂಗೇಶ್ವರ ಭಟ್, ಆಡಳಿತ ಮೊಕ್ತೇಸರ ಕೆ.ಎಂ. ಶಂಕರನಾರಾಯಣ ಭಟ್, ಹಿರಿಯರಾದ ವಿ.ಶ್ರೀಕೃಷ್ಣ ಭಟ್ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಕೆ.ಎಂ. ಶ್ಯಾಮ ಭಟ್ ವರದಿ, ಲೆಕ್ಕಪತ್ರ ಮಂಡಿಸಿದರು. ಸುಬ್ರಹ್ಮಣ್ಯ ಕುಮಾರ ಕುಂಟಿಕಾನಮಠ ವಂದಿಸಿದರು. ಬ್ರಹ್ಮಕಲಶೋತ್ಸವದ ಯಶಸ್ಸಿಗೆ ದುಡಿದ ಕಾರ್ಯಕರ್ತರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

.jpg)
