ನವದೆಹಲಿ: ಮೇ 20ರಂದು ನಡೆದ ಲೋಕಸಭಾ ಚುನಾವಣೆಯ ಐದನೇ ಹಂತದಲ್ಲಿ ಶೇ 62.2ರಷ್ಟು ಮತದಾನವಾಗಿದ್ದು, ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
0
samarasasudhi
ಮೇ 24, 2024
ನವದೆಹಲಿ: ಮೇ 20ರಂದು ನಡೆದ ಲೋಕಸಭಾ ಚುನಾವಣೆಯ ಐದನೇ ಹಂತದಲ್ಲಿ ಶೇ 62.2ರಷ್ಟು ಮತದಾನವಾಗಿದ್ದು, ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಶೇ 61.48ರಷ್ಟು ಪುರುಷರು ಹಾಗೂ ಶೇ 63ರಷ್ಟು ಮಹಿಳೆಯರು ಮತದಾನ ಮಾಡಿದ್ದಾರೆ.
ಬಿಹಾರ, ಜಾರ್ಖಂಡ್, ಲಡಾಖ್, ಒಡಿಶಾ ಮತ್ತು ಉತ್ತರ ಪ್ರದೇಶದಲ್ಲಿ ಪುರುಷರಿಗಿಂತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ಆಯೋಗದ ಅಧಿಕಾರಿಗಳು ಹೇಳಿದ್ದಾರೆ.
2019ರ ಲೋಕಸಭಾ ಚುನಾವಣೆಯ ಐದನೇ ಹಂತದಲ್ಲಿ ಶೇ 64.16 ರಷ್ಟು ಮತದಾನವಾಗಿತ್ತು ಎಂದಿದ್ದಾರೆ.