ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಅನಂತ್‌ನಾಗ್- ರಜೌರಿ ಜಿಲ್ಲೆಯ ಜನತೆಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ.
0
samarasasudhi
ಮೇ 27, 2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಅನಂತ್‌ನಾಗ್- ರಜೌರಿ ಜಿಲ್ಲೆಯ ಜನತೆಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ.
ಅನಂತ್‌ನಾಗ್-ರಜೌರಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ಮೇ 25 ರಂದು ಮತದಾನ ನಡೆದಿದ್ದು, ಶೇ 54.84 ರಷ್ಟು ಮತದಾನವಾಗಿದೆ.
ಕಳೆದ ಕೆಲವು ದಶಕಗಳಿಂದ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಜನತೆ ಚುನಾವಣೆಗೆ ಹೆಚ್ಚಿನ ಒತ್ತು ನೀಡುವುದಾಗಲೀ ಅಥವ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಳ್ಳುವುದಾಗಲೀ ಮಾಡುತ್ತಿರಲಿಲ್ಲ