ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ತಂಡದ (ಎನ್‌ಐಎ) ಅಧಿಕಾರಿಗಳು ಅಂತರರಾಷ್ಟ್ರೀಯ ಮಾನವ ಕಳ್ಳಸಾಗಣೆ ಮತ್ತು ಸೈಬರ್ ವಂಚನೆಯಲ್ಲಿ ತೊಡಗಿಸಿಕೊಂಡಿದ್ದ ಐವರನ್ನು ಬಂಧಿಸಿದ್ದಾರೆ.
0
samarasasudhi
ಮೇ 28, 2024
ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ತಂಡದ (ಎನ್‌ಐಎ) ಅಧಿಕಾರಿಗಳು ಅಂತರರಾಷ್ಟ್ರೀಯ ಮಾನವ ಕಳ್ಳಸಾಗಣೆ ಮತ್ತು ಸೈಬರ್ ವಂಚನೆಯಲ್ಲಿ ತೊಡಗಿಸಿಕೊಂಡಿದ್ದ ಐವರನ್ನು ಬಂಧಿಸಿದ್ದಾರೆ.
ಆರೋಪಿಗಳು ಉದ್ಯೋಗ ನೀಡುವುದಾಗಿ ಸುಳ್ಳು ಭರವಸೆ ನೀಡಿ ಭಾರತೀಯ ಯುವಕರನ್ನು ವಿದೇಶಗಳಿಗೆ ಕರೆದೊಯ್ಯುತ್ತಿದ್ದರು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ದೆಹಲಿ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢದ 15 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿರುವುದಾಗಿ ಎನ್‌ಐಎ ಹೇಳಿದೆ.
ಲಾವೋಸ್ ಮತ್ತು ಕಾಂಬೋಡಿಯಾ, ಗೋಲ್ಡನ್ ಟ್ರಯಾಂಗಲ್ ಸ್ಪೆಷಲ್ ಎಕನಾಮಿಕ್ ಝೋನ್‌ನಲ್ಲಿರುವ ನಕಲಿ ಕಾಲ್ ಸೆಂಟರ್‌ನಲ್ಲಿ ಬಲವಂತವಾಗಿ ಯುವಕರಿಂದ ಕೆಲಸ ಮಾಡಿಸಲಾಗುತ್ತದೆ. ಈ ಜಾಲ ವಿದೇಶಿ ಪ್ರಜೆಗಳ ನಿಯಂತ್ರಣದಲ್ಲಿದೆ. ಕ್ರೆಡಿಟ್ ಕಾರ್ಡ್ ವಂಚನೆ, ನಕಲಿ ಅಪ್ಲಿಕೇಶನ್‌ಗಳನ್ನು ಬಳಸಿಕೊಂಡು ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆ, ಹನಿ ಟ್ರ್ಯಾಪಿಂಗ್ ಸೇರಿದಂತೆ ಹಲವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಯುವಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ವೇಳೆ ಹಲವು ದಾಖಲೆಗಳು, ಡಿಜಿಟಲ್ ಸಾಧನಗಳು, ಪಾಸ್‌ಪೋರ್ಟ್‌ಗಳು ಸೇರಿ ಹಲವು ನಕಲಿ ಉದ್ಯೋಗ ಪತ್ರಗಳು ದೊರೆತಿವೆ.
ಈ ಸಂಬಂಧ ಎಫ್‌ಐಆರ್ ದಾಖಲಿಸಿರುವ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.