HEALTH TIPS

ಶ್ರೀನಗರದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನ: 7 ಸಾವಿರ ಜನ ಭಾಗಿ

         ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 10ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ದೇಶದ ವಿವಿಧ ಭಾಗಗಳಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಸುಮಾರು 7 ಸಾವಿರಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದರು.

          ಈ ಬಾರಿ ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರದ ದಡದಲ್ಲಿ ಯೋಗ ದಿನ ಆಚರಿಸಲು ನಿರ್ಧರಿಸಲಾಗಿದೆ. ಮುಖ್ಯ ಕಾರ್ಯಕ್ರಮವು ಶ್ರೀನಗರದ ಶೇರ್-ಇ-ಕಾಶ್ಮೀರ್ ಅಂತರರಾಷ್ಟ್ರೀಯ ಸಮ್ಮೇಳನ ಕೇಂದ್ರದಲ್ಲಿ ನಡೆಯಲಿದೆ

            ಪಿಟಿಐ ಜೊತೆ ಮಾತನಾಡಿದ ಅವರು, 'ಅಂತರರಾಷ್ಟ್ರೀಯ ಯೋಗ ದಿನದಂದು ಕಾಶ್ಮೀರ ಕಣಿವೆಗೆ ಮೋದಿ ಅವರು ಆಗಮಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ' ಎಂದರು.

'ಪ್ರಧಾನಿ ಮೋದಿ ಅವರು ಕಾಶ್ಮೀರದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದ್ದು, ಅದಕ್ಕಾಗಿಯೇ ಶ್ರೀನಗರದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ನಿರ್ಧರಿಸಿದ್ದಾರೆ. ಜೂನ್ 21ರಂದು ಸುಮಾರು 7 ಸಾವಿರ ಜನ ಮೋದಿ ಅವರೊಂದಿಗೆ ದಾಲ್ ಸರೋವರದ ದಡದಲ್ಲಿ ಯೋಗ ಮಾಡಲಿದ್ದಾರೆ' ಎಂದು ಸಿನ್ಹಾ ಹೇಳಿದರು.

               'ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ 23 ಲಕ್ಷ ಜನರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಜನರಲ್ಲಿ ಯೋಗ ಮಾಡುವತ್ತ ಒಲವು ಹೆಚ್ಚಿರುವುದನ್ನು ನಾವು ನೋಡಬಹದು. ಒತ್ತಡ ಮುಕ್ತ ಜೀವನಕ್ಕಾಗಿ ಜನರು ಯೋಗದತ್ತ ಒಲವು ತೋರುತ್ತಿದ್ದಾರೆ' ಎಂದು ಹೇಳಿದರು.

'ಶಾಂತಿಯುತವಾಗಿ ಯೋಗ ದಿನಾಚರಣೆಯನ್ನು ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ' ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries