HEALTH TIPS

ಕೇಜ್ರಿವಾಲ್‌ ಜಾಮೀನಿಗೆ ಹೈಕೋರ್ಟ್‌ ಮಧ್ಯಂತರ ತಡೆ: ಜೂನ್‌ 26ಕ್ಕೆ SC ವಿಚಾರಣೆ

          ವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ನೀಡಿದ್ದ ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ವಿಧಿಸಿದ್ದ ಮಧ್ಯಂತರ ತಡೆಯ ವಿರುದ್ಧ ಅವರು ಸಲ್ಲಿಸಿದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಜೂನ್‌ 26ಕ್ಕೆ ನಿಗದಿಪಡಿಸಿದೆ.

           ಮನೋಜ್‌ ಮಿಶ್ರಾ ಮತ್ತು ಎಸ್.ವಿ.ಎನ್.ಭಟ್ಟಿ ಅವರಿದ್ದ ರಜಾಕಾಲದ ಪೀಠವು, ಈ ವಿಷಯದ ಕುರಿತು ಹೈಕೋರ್ಟ್ ಆದೇಶ ಹೊರಡಿಸುವವರೆಗೆ ಕಾಯಬೇಕು ಎಂದಿದೆ.

             ಕೇಜ್ರಿವಾಲ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಜಾಮೀನು ಆದೇಶದ ಮೇಲಿನ ಮಧ್ಯಂತರ ತಡೆಯನ್ನು ತೆರವು ಮಾಡುವಂತೆ ಕೋರಿದರು.

          ಇ.ಡಿ ಪರವಾಗಿ ವಾದ ಮಂಡಿಸಿದ ಎಎಸ್‌ಜಿ ಎಸ್‌.ವಿ ರಾಜು ಅವರು ಕೇಜ್ರಿವಾಲ್‌ ಅವರ ಮನವಿಯನ್ನು ವಿರೋಧಿಸಿದರು. ಜತೆಗೆ ಹೈಕೋರ್ಟ್ ತನ್ನ ತಡೆಯಾಜ್ಞೆ ಅರ್ಜಿಯ ತೀರ್ಪು ಪ್ರಕಟಿಸಲಿದೆ ಎಂದು ಹೇಳಿದರು.

            ಮಾರ್ಚ್ 21 ರಂದು ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಹೈಕೋರ್ಟ್ ಮಧ್ಯಂತರ ತಡೆ ನೀಡದಿದ್ದರೆ ಕಳೆದ ಶುಕ್ರವಾರ ಕೇಜ್ರಿವಾಲ್‌, ತಿಹಾರ್ ಜೈಲಿನಿಂದ ಬಿಡುಗಡೆಯಾಗುತ್ತಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries