ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಜುಲೈ 3ರವರೆಗೆ ವಿಸ್ತರಿಸಿದೆ.
0
samarasasudhi
ಜೂನ್ 20, 2024
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಜುಲೈ 3ರವರೆಗೆ ವಿಸ್ತರಿಸಿದೆ.
ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯು ಬುಧವಾರ ಮುಕ್ತಾಯವಾದ ಕಾರಣ, ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ವಿಚಾರಣೆ ವೇಳೆ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂಬ ಜಾರಿ ನಿರ್ದೇಶನಾಲಯದ (ಇ.ಡಿ) ಕೋರಿಕೆಯನ್ನು ಕೇಜ್ರಿವಾಲ್ ಪರ ವಕೀಲರು ತೀವ್ರವಾಗಿ ವಿರೋಧಿಸಿದರು. ಇ.ಡಿ ಕೋರಿಕೆಯನ್ನು ಬೆಂಬಲಿಸಲು ಯಾವುದೇ ಆಧಾರಗಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.