HEALTH TIPS

ತಮಿಳುನಾಡು: ವಿಷಯುಕ್ತ ಮದ್ಯ ಕುಡಿದು ಮೃತಪಟ್ಟವರ ಸಂಖ್ಯೆ 63ಕ್ಕೆ ಏರಿಕೆ

          ಚೆನ್ನೈ: ತಮಿಳುನಾಡಿನ ಕಲ್ಲಕುರಿಚ್ಚಿಯಲ್ಲಿ ನಡೆದ ವಿಷಯುಕ್ತ ಮದ್ಯ ಸೇವನೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 63ಕ್ಕೆ ಏರಿದ್ದು, ಹಲವರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ.

           ದುರಂತದಲ್ಲಿ ಮೂವರು ಮಹಿಳೆಯರು, ಒಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿ 63 ಜನ ಸತ್ತಿದ್ದಾರೆ ಎಂದು ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್ ದೃಢಪಡಿಸಿದ್ದಾರೆ.


             ಒಟ್ಟು 219 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು ಎಂದು ತಿಳಿಸಿದ್ದಾರೆ.

'ಬಾಧಿತರ ಪೈಕಿ ಹಲವರು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ವಿಷಯುಕ್ತ ಮದ್ಯ ಮಾರಾಟ ತಡೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ' ಎಂದು ಕಲ್ಲಕುರಿಚಿ ಜಿಲ್ಲಾಧಿಕಾರಿ ಪ್ರಶಾಂತ್ ತಿಳಿಸಿದ್ದಾರೆ.

              'ಅಗತ್ಯ ಪ್ರಮಾಣದ ಔಷಧ ದಾಸ್ತಾನು ಇದೆ. ವಿಷಯುಕ್ತ ಮದ್ಯ ಸೇವಿಸಿದವರು ಸ್ವಯಂಪ್ರೇರಣೆಯಿಂದ ಚಿಕಿತ್ಸೆ ಪಡೆದು ಸಂಭವನೀಯ ಅಪಾಯದಿಂದ ಪಾರಾಗಬೇಕು' ಎಂದು ಅವರು ಮನವಿ ಮಾಡಿದ್ದಾರೆ.

              ಕಲ್ಲಕುರಿಚ್ಚಿಯಲ್ಲಿ ನಡೆದ ಅವಘಡ ಕುರಿತು ಸಿಬಿಐ ತನಿಖೆಗೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries