HEALTH TIPS

ಒಡಿಶಾದ ಮೊದಲ BJP ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಚರಣ್ ಮಾಝಿ

          ಭುವನೇಶ್ವರ: ಬುಡಕಟ್ಟು ಜನಾಂಗದ ನಾಯಕ ಮೋಹನ್‌ ಚರಣ್ ಮಾಝಿ ಅವರು  ಬುಧವಾರ ಒಡಿಶಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

             ಭುವನೇಶ್ವರದ ಜನತಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮೋಹನ್‌ ಚರಣ್ ಮಾಝಿ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದ್ದಾರೆ.

            ಹಿರಿಯ ಬಿಜೆಪಿ ನಾಯಕ ಮತ್ತು ಪಟ್ನಾಗಢ ಶಾಸಕ ಕೆ.ವಿ.ಸಿಂಗ್ ಡಿಯೋ ಹಾಗೂ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ನಿಮಪಾರ ಕ್ಷೇತ್ರದ ಪ್ರವತಿ ಪರಿದಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.


              ಜನತಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಘುಬರ್ ದಾಸ್ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

               ಕೇಂದ್ರ ಸಚಿವರಾದ ಅಮಿತ್ ಶಾ, ರಾಜ್‌ನಾಥ್ ಸಿಂಗ್, ಭೂಪೇಂದರ್ ಯಾದವ್, ಧರ್ಮೇಂದ್ರ ಪ್ರಧಾನ್, ಜುಯಲ್ ಓರಮ್, ಅಶ್ವಿನಿ ವೈಷ್ಣವ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

                 ಒಡಿಶಾದ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ಉತ್ತರ ಪ್ರದೇಶ, ಗೋವಾ, ರಾಜಸ್ಥಾನ, ಮಧ್ಯಪ್ರದೇಶ, ಅಸ್ಸಾಂ, ಗುಜರಾತ್, ಛತ್ತೀಸಗಢ ಮತ್ತು ಉತ್ತರಾಖಂಡದ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಒಡಿಶಾದಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಸರ್ಕಾರ ರಚಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries