HEALTH TIPS

ಇದೀಗ ಅಧಿಕೃತ; ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ

          ವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ನಾಯಕರ ಸ್ಥಾನಮಾನ ನೀಡಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಘೋಷಿಸಿದ್ದಾರೆ.

          ಈ ಮೊದಲು ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ರಾಹುಲ್ ಗಾಂಧಿ ವಹಿಸಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿತ್ತು.

           'ಇಂಡಿಯಾ' ಮೈತ್ರಿಕೂಟದ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು.


             ಇಂದೇ 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ. ಬಳಿಕ ಬಿರ್ಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರು ಅಭಿನಂದಿಸಿ ಪೀಠಕ್ಕೆ ಕರೆತಂದರು.

          ಸ್ಪೀಕರ್ ಅವರನ್ನು ಸ್ವಾಗತಿಸಿ ಭಾಷಣ ಮಾಡಿದ ರಾಹುಲ್, 'ಸದನದಲ್ಲಿ ಮಾತನಾಡಲು ನಮಗೂ (ವಿಪಕ್ಷಗಳಿಗೆ) ಅವಕಾಶ ನೀಡುವ ನಂಬಿಕೆಯಿದೆ' ಎಂದು ಹೇಳಿದರು.

                'ನೀವು ಜನರ ಧ್ವನಿಯ ಅಂತಿಮ ತೀರ್ಪುಗಾರರು. ಸರ್ಕಾರಕ್ಕೆ ರಾಜಕೀಯ ಬಲ ಇರಬಹುದು. ಆದರೆ ವಿಪಕ್ಷಗಳು ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ. ನಿಮ್ಮ ಕರ್ತವ್ಯಕ್ಕೆ ವಿಪಕ್ಷಗಳು ನೆರವಾಗಲು ಬಯಸುತ್ತದೆ' ಎಂದು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries